ಮಂಗಳೂರು: ಕೊರೊನಾ ಸಮಯದಲ್ಲಿ ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ತಮ್ಮ ಜೀವ ಪಣಕ್ಕಿಟ್ಟು ಸಂಕಷ್ಟದ ಮಧ್ಯೆ ಕೆಲ್ಸ ಮಾಡ್ತಿದ್ದಾರೆ. ಇದೇ ವೇಳೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಅವರ ರಕ್ಷಣೆಗೆ ಸರಕಾರ ಧಾವಿಸಬೇಕು ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆಗ್ರಹಿಸಿದ್ದಾರೆ.
ಮಂಗಳೂರಲ್ಲಿ ಮಾತನಾಡಿದ ಅವರು, ಕೊರೊನಾದಿಂದಾಗಿ ಆಸ್ಪತ್ರೆಗಳಲ್ಲಿ ಬಿಲ್ ಕಟ್ಟಲಾಗದೆ ಅನೇಕ ಶಿಕ್ಷಕರು ಪರದಾಡುತ್ತಿದ್ದಾರೆ. ಅವರಿಗೆ ಸರ್ಕಾರ ಸಹಕಾರ ನೀಡಬೇಕು ಎಂದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಪ್ರೌಢಶಾಲೆಯಲ್ಲಿ ವಿದ್ಯಾಗಮ ಯೋಜನೆಯಡಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಯೊರ್ವರು ಕೊರೊನಾದಿಂದಾಗಿ ಜೀವನ್ಮರಣ ನಡುವೆ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರಿ ಹಾಗೂ ಮಾಧ್ಯಮಗಳ ಮನವಿ ಮೇರೆಗೆ ಸಿಎಂ ಹಾಗೂ ಶಿಕ್ಷಣ ಸಚಿವರು ಸಹಾಯ ಮಾಡಿದ್ದಕ್ಕೆ ಅಭಿನಂದಿಸುವುದಾಗಿ ಅಭಯಚಂದ್ರ ಜೈನ್ ಹೇಳಿದರು.
Kshetra Samachara
15/10/2020 09:59 pm