ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರನ ಕುಟುಂಬಕ್ಕೆ ಸಚಿವರಿಂದ ಪರಿಹಾರ ವಿತರಣೆ

ಕಾಪು: ದೋಣಿ ದುರಂತದಲ್ಲಿ ಇತ್ತೀಚೆಗೆ ಸಾವನ್ನಪ್ಪಿದ ಸುಖೇಶ್ ಬಪ್ಪನಾಡು ಅವರ ಮನೆಗೆ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.

ಕುಟುಂಬ ಸದಸ್ಯರೊಂದಿಗೆ ಕುಶಲೋಪರಿ ವಿಚಾರಿಸಿದ ಸಚಿವರು, 3 ಲಕ್ಷ ರೂ. ಪರಿಹಾರ ಧನವನ್ನು ಅವರ ತಾಯಿಗೆ ವಿತರಿಸಿದರು.

ಸಚಿವರ ಜೊತೆ ಶಾಸಕ ಲಾಲಾಜಿ ಆರ್. ಮೆಂಡನ್, ದ. ಕ. ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ ಪಾಲ್ ಸುವರ್ಣ, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿ. ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶಿಲ್ಪಾ ಸುವರ್ಣ, ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

16/10/2020 06:46 pm

Cinque Terre

7.82 K

Cinque Terre

0

ಸಂಬಂಧಿತ ಸುದ್ದಿ