ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಪಿಟೀಲು ಊದುವುದನ್ನು ನಿಲ್ಲಿಸಲಿ : ಮಿಥುನ್ ರೈ ವೆಂಗ್ಯ

ಮುಲ್ಕಿ: ಕರ್ನಾಟಕದ ಮಾಜೀ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ"ಉಪಚುನಾವಣೆ ಫಲಿತಾಂಶ ಬಳಿಕ ಹುಲಿಯಾ ಕಾಡಿಗೆ ಬಂಡೆ ಛಿದ್ರ" ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕೆಂಡಾಮಂಡಲವಾಗಿದ್ದು ಮೊದಲು ಮಾನ್ಯ ರಾಜ್ಯಾಧ್ಯಕ್ಷರು ಪಿಟೀಲು ಊದುವುದನ್ನು ನಿಲ್ಲಿಸಲಿ ಎಂದು ವ್ಯಂಗ್ಯವಾಡಿದ್ದಾರೆ. ಅವರು ಹಳೆಯಂಗಡಿಯ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಸೋಲುವ ಭೀತಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ಅನಗತ್ಯ ಗೊಂದಲಮಯ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ವಿಧಾನಸಭೆ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರ ಗಿಮಿಕ್ ನಡೆಯುವುದಿಲ್ಲ ಎಂದು ಹೇಳಿದ ಅವರು ದಯವಿಟ್ಟು ಬಿಜೆಪಿ ವರಿಷ್ಠರು ಮಾನ್ಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರನ್ನು ವಾಹನದ ಮೂಲಕ ಬೆಂಗಳೂರಿಂದ ಮಂಗಳೂರಿಗೆ ಕಳುಹಿಸಿ ಕೊಡಲಿ. ರಾಷ್ಟ್ರೀಯ ಹೆದ್ದಾರಿ 75 ಮಂಗಳೂರು ಬೆಂಗಳೂರು ರಸ್ತೆ ತೀವ್ರ ಕೆಟ್ಟುಹೋಗಿದ್ದು ಪಿಟೀಲು ಊದುವುದನ್ನು ನಿಲ್ಲಿಸಿ ಹೆದ್ದಾರಿ ದುರಸ್ತಿ ಕಾರ್ಯ ನಡೆಸಿ ಒಳ್ಳೆಯ ಕೆಲಸ ಮಾಡಲಿ ಎಂದು ವಿನಂತಿಸಿದ್ದಾರೆ. ಈ ಸಂದರ್ಭ ಮಾಜೀ ಸಚಿವ ಅಭಯಚಂದ್ರ ಜೈನ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು,ಕೆಪಿಸಿಸಿ ಕೋಆರ್ಡಿನೇಟರ್ ವಸಂತ ಬೆರ್ನಾಡ್, ಮುಲ್ಕಿ ನ. ಪಂ. ಸದಸ್ಯ ಪುತ್ತುಭಾವ ಮತ್ತಿತರರಿದ್ದರು.

Edited By : Nagesh Gaonkar
Kshetra Samachara

Kshetra Samachara

22/10/2020 03:33 pm

Cinque Terre

23.13 K

Cinque Terre

7

ಸಂಬಂಧಿತ ಸುದ್ದಿ