ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ ಸುಮಾರು 23 ವರ್ಷಗಳ ಕನಸು ಕೊನೆಗೂ ನನಸಾಗಿದೆ!
ಜಿಲ್ಲಾ ಕೇಂದ್ರದ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಬೇಡಿಕೆ ಎರಡು ದಶಕಕ್ಕಿಂತಲೂ ಹಳೆಯದು. ಈ ಸಂಬಂಧ ರಾಜ್ಯ ಹಣಕಾಸು ಇಲಾಖೆ ಯೋಜನೆಗೆ ಒಪ್ಪಿಗೆ ನೀಡಿದ್ದು, ಸಚಿವ ಸಂಪುಟದಲ್ಲೂ ಒಪ್ಪಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಸಂಬಂಧ ಮಾತನಾಡಿದ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿದೆ. 115 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಮತ್ತು 250 ಬೆಡ್ , ಆಸ್ಪತ್ರೆಗೆ ಬೇಕಾದಷ್ಟು ಸಿಬ್ಬಂದಿ, ಪೀಠೋಪಕರಣ ಸೇರಿದ ಯೋಜನೆಯಾಗಿದೆ. ಉಡುಪಿ ಜನತೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ , ಹಿಂದಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಶಾಸಕ ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
23/10/2020 12:56 pm