ಮಂಗಳೂರು: ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಸಂಭ್ರಮದ ಮಂಗಳೂರು ದಸರಾ ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ದೇವರ ದರ್ಶನ ಪಡೆದರು.
ಬಳಿಕ ಕ್ಷೇತ್ರದ ರೂವಾರಿ, ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದು ಸಮಾಲೋಚನೆ ನಡೆಸಿದರು. ಇದೇ ವೇಳೆ ಶಾಸಕ ವೇದವ್ಯಾಸ್ ಕಾಮತ್, ಈ ಬಾರಿ ಆಯ್ಕೆಯಾದ ಮಹಾನಗರ ಪಾಲಿಕೆ ಕಾರ್ಪೊರೇಟರ್ ಗಳನ್ನು ಪರಿಚಯಿಸಿದರು. ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಮೈಸೂರಿನ ನಂತರ ರಾಜ್ಯದಲ್ಲಿ ಎರಡನೇ ಅತಿದೊಡ್ಡ ದಸರಾ ಎಂಬುದು ಮಂಗಳೂರು ದಸರಾ ಗುರುತಿಸಿಕೊಂಡಿದೆ ಎಂದರು. ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್ ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮುಡಾ ಅಧ್ಯಕ್ಷ ರವಿಶಂಕರ ಮಿಜಾರು, ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎಂ.ಸುದರ್ಶನ ಮೂಡಬಿದ್ರೆ, ವಕ್ತಾರ ರಾಧಾಕೃಷ್ಣ, ಪಾಲಿಕೆ ಸದಸ್ಯರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಪೂರ್ಣಿಮಾ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸಾಯಿರಾಂ, ಕೋಶಾಧಿಕಾರಿ ಪದ್ಮರಾಜ್ ಆರ್. ಉಪಸ್ಥಿತರಿದ್ದರು.
Kshetra Samachara
25/10/2020 10:57 am