ಕಾಪು: ಕಾಪು ಪುರಸಭೆ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿರುವ ಪುರಸಭೆ ಸದಸ್ಯ ಸುರೇಶ್ ದೇವಾಡಿಗ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಸುರೇಶ್ ದೇವಾಡಿಗ ಪಕ್ಷದ ವಿಪ್ ಉಲ್ಲಂಘಿಸಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿದ್ದು, ಈ ಹಿನ್ನೆಲೆಯಲ್ಲಿ ಸುರೇಶ್ ದೇವಾಡಿಗರ ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ನರಸಿಂಹ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
29/10/2020 05:21 pm