ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಿನೇಶ್ ಮೇಲೆ ಹಲ್ಲೆ ಪ್ರಕರಣ- ಸಚಿವ ಕೋಟಾ ಭೇಟಿ

ಮುಲ್ಕಿ:ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರ ಆರೋಗ್ಯ ವಿಚಾರಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರೊಂದಿಗೆ ಮಂಗಳೂರು ನಗರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಎಜೆ ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ತಜ್ಞ ವೈದ್ಯರೊಂದಿಗೆ ಸಚಿವರು, ಶಾಸಕರು ಸಮಾಲೋಚನೆ ನಡೆಸಿ ದಿನೇಶ್ ಅವರ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಶಾಸಕ ಡಾ.ಭರತ್ ಶೆಟ್ಟಿ ದಿನೇಶ್ ಅವರ ಆರೋಗ್ಯದ ಬಗ್ಗೆ ನಿರಂತರವಾಗಿ ವೈದ್ಯರೊಂದಿಗೆ, ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಬಿಜೆಪಿ ಮಂಡಲ ಅಧ್ಯಕ್ಷರಾದ ಚಂದ್ರಹಾಸ ಪಂಡಿತ್ ಹೌಸ್, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

30/10/2020 04:05 pm

Cinque Terre

8.92 K

Cinque Terre

0

ಸಂಬಂಧಿತ ಸುದ್ದಿ