ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿಯನ್ನು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.
ಬಳಿಕ “ರೈತ ಹಕ್ಕುಗಳ ದಿನ” ಘೋಷಣೆಯಡಿ ಕೇಂದ್ರ ಸರ್ಕಾರದ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
31/10/2020 09:40 pm