ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನವೆಂಬರ್ 5ರಂದು ಗುರುವಾರ ಮಂಗಳೂರಿನ ರಮಣ್ ಪೈ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಲ್ಲಿ 20 ವರ್ಷಗಳ ಹಿಂದೆ ಬಿಜೆಪಿ ರಾಜ್ಯ ಸಮಿತಿ ಸಭೆ ನಡೆದಿತ್ತು. ಇದಾದ ಬಳಿಕ ನವೆಂಬರ್ 5ರ ಬೆಳಗ್ಗೆ 10ರಿಂದ ಸಂಜೆ 5.30ರ ವರೆಗೆ ವಿವಿಧ ಗೋಷ್ಠಿಗಳೊಂದಿಗೆ ರಾಜ್ಯ ಕಾರ್ಯಕಾರಿಣಿ ಸಭೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಈ ವೇಳೆ ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ರಾಧಾಕೃಷ್ಣ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
01/11/2020 05:29 pm