ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರಿನ ಉಳ್ಳಾಲ ಪಾಕಿಸ್ತಾನ ಇದ್ದಂತೆ: ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಾತ್ಮಕ ಹೇಳಿಕೆ

ಮಂಗಳೂರು: ಮಂಗಳೂರಿನ ಉಳ್ಳಾಲಕ್ಕೆ ಹೋದರೆ ಪಾಕಿಸ್ತಾನವನ್ನು ನೋಡಿದಂಗೆ ಆಗುತ್ತದೆ. ಉಳ್ಳಾಲ ಪಾಕಿಸ್ತಾನವೇ ಅಲ್ವಾ..? ಅದು ಬೇರೆ ಆಗೋಕೆ ಸಾಧ್ಯ ಇದೆಯಾ..? ಅನೇಕ ಕಡೆ ಪಾಕಿಸ್ತಾನ ನಿರ್ಮಾಣ ಆಗಿದೆ ಅಂತಾ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಕಿನ್ಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿನೂ ಯಾರೂ ಇರಲ್ಲ. ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯಾದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ..? ಕೇಳಿದ್ರು. ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ಆಗ ನಮ್ಮ ದೇವಸ್ಥಾನವನ್ನು ಉಳಿಸುವವರು ಯಾರು..? ದೈವಸ್ಥಾನವನ್ನು ಉಳಿಸುವವರು ಯಾರು..? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು..? ಪಾಕಿಸ್ತಾನ ಯಾಕೆ ಆಯಿತು..? ನಮ್ಮವರ ಸಂಖ್ಯೆ ಕಡಿಮೆ ಇತ್ತು ಅವರ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ ಬಾಂಗ್ಲಾದೇಶ ನಿರ್ಮಾಣವಾಯಿತು ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

Edited By : Manjunath H D
Kshetra Samachara

Kshetra Samachara

02/11/2020 05:44 pm

Cinque Terre

32.53 K

Cinque Terre

12

ಸಂಬಂಧಿತ ಸುದ್ದಿ