ಮಂಗಳೂರು: ಕಳೆದ ಎರಡು ವರ್ಷಗಳಿಂದ ನ್ಯಾಯಾಲಯದಲ್ಲಿ ತಡೆಯಿದ್ದ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಉಳ್ಳಾಲ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಇಂದು ನಡೆಯಿತು. ಅಧ್ಯಕ್ಷೆಯಾಗಿ ಕಾಂಗ್ರೆಸ್ನ ಚಿತ್ರಾ ಚಂದ್ರಕಾಂತ್ ಮತ್ತು ಉಪಾಧ್ಯಕ್ಷರಾಗಿ ಐಯೂಬ್ ಮಂಚಿಲ ಆಯ್ಕೆಯಾಗಿದ್ದಾರೆ.
ಇಂದು ಸಂಜೆ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಎಸ್ಡಿಪಿಐನಿಂದ ಜರೀನಾ ರವೂಫ್ ಹಾಗೂ ಬಿಜೆಪಿಯಿಂದ ರೇಷ್ಮಾ ಜಗದೀಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ರಮೀಜ್ ಕೋಡಿ ಮತ್ತು ಜೆಡಿಎಸ್ನ ಜಬ್ಬಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.
Kshetra Samachara
02/11/2020 10:07 pm