ಉಡುಪಿ: ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾದ ಮೊದಲ ವಿಭಾಗ ಮಟ್ಟದ ಸಭೆಯನ್ನು ನವಂಬರ್ ನಾಲ್ಕರಂದು ಅಪರಾಹ್ನ 2.30 ಗಂಟೆಗೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಗಿದೆ. ಮಂಗಳೂರು ವಿಭಾಗ ಮತ್ತು ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ಉಡುಪಿಗೆ ಹತ್ತಿರವಾಗಿರುವುದರಿಂದ ಈ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸಿ ಸಭೆ ನಡೆಸಲಾಗುವುದು. ಈ ಸಭೆಯು ರಾಜ್ಯ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಸಭೆಯಲ್ಲಿ ಎಸ್ ಸಿ ಮೋರ್ಚಾ ವನ್ನು ಸಂಘಟನಾತ್ಮಕವಾಗಿ ಬೂತ್ ಮಟ್ಟದಲ್ಲಿ ಬಲಪಡಿಸುವ ಕುರಿತು ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ .ಜೊತೆಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಸಿ ಮೋರ್ಚಾದ ಪಾತ್ರ, ರಾಜ್ಯದೆಲ್ಲೆಡೆ ಬಿಜೆಪಿ ಪಕ್ಷ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಪಡೆಯಲು ಎಸ್.ಸಿ ಮೋರ್ಚಾದ ಕಾರ್ಯ ಯೋಜನೆಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಎಸ್ ಸಿ ಮುಖಂಡ ಮತ್ತು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ ಬಾಬು ಮಾಹಿತಿ ನೀಡಿದರು.
Kshetra Samachara
03/11/2020 01:28 pm