ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಶಿರಾ, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಜಯ ಖಚಿತ: ಕೋಟ ಶ್ರೀನಿವಾಸ ಪೂಜಾರಿ

ಮುಲ್ಕಿ: ಶಿರಾ ಹಾಗೂ ರಾಜರಾಜೇಶ್ವರಿ ಕ್ಷೇತ್ರ ಸಹಿತ ನಾಲ್ಕು ವಿಧಾನ ಪರಿಷತ್ ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸುವುದು ಖಂಡಿತ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮುಲ್ಕಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದರೆ ಯಡಿಯೂರಪ್ಪನವರು ಮಂತ್ರಿ ಹುದ್ದೆಯ ಭರವಸೆ ನೀಡಿದ್ದು ಖಂಡಿತಾ ಈಡೇರಿಸುತ್ತಾರೆ. ಯಡಿಯೂರಪ್ಪನವರು ಇಂದಿಗೂ ಮುಂದೆಯೂ ನಮ್ಮ ನಾಯಕನಾಗಿರುತ್ತಾರೆ. ಅವರು ಆಡಳಿತ ವಹಿಸಿಕೊಂಡ ಮೇಲೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಡವರಿಗೆ ನೆರವು, ಅಭಿವೃದ್ಧಿ ಕಾರ್ಯಗಳನ್ನು ಹಾಗೂ ಡ್ರಗ್ಸ್ ಸಹಿತ ಮಾದಕ ವಸ್ತುಗಳನ್ನು ಮಟ್ಟ ಹಾಕಿ ಉತ್ತಮ ಆಡಳಿತ ನೀಡಿದ್ದಾರೆ ಎಂದರು.

Edited By : Manjunath H D
Kshetra Samachara

Kshetra Samachara

03/11/2020 04:45 pm

Cinque Terre

10.84 K

Cinque Terre

0

ಸಂಬಂಧಿತ ಸುದ್ದಿ