ಮಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನ ಪಿವಿಎಸ್ ಸರ್ಕಲ್ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿಎಂ ಅವರು ಬೆಂಗಳೂರು ಏರ್ ಪೋರ್ಟ್ ನಿಂದ ಇಂಡಿಗೋ ವಿಮಾನದಲ್ಲಿ
ಹೊರಟು ರಾತ್ರಿ 7 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿ ಅಂದು ಮಂಗಳೂರಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗುರುವಾರ ಬೆಳಿಗ್ಗೆ 10 ಗಂಟೆಗೆ ಟಿ.ವಿ.ರಮಣ್ಣ ಪೈ ಸಭಾಂಗಣದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದರು.
ಅದೇ ದಿನ ಬೆಳಿಗ್ಗೆ 11.30ಕ್ಕೆ ಹೋಟೆಲ್ ಓಷಿಯನ್ ನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30 ರಿಂದ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ ಎಂದರು. ಅಂದೇ ರಾತ್ರಿ 7.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ರಾತ್ರಿ 8.40 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ಕೋಟ ಹೇಳಿದರು.
Kshetra Samachara
03/11/2020 08:09 pm