ಕಾಪು: ಕಾಪು ಬಿಜೆಪಿ ಕಛೇರಿಯಲ್ಲಿ ನೂತನವಾಗಿ ಆಯ್ಕೆಯಾದ ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಎಪಿಎಂಸಿ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಸರೋಜಿನಿ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಮಾತನಾಡಿ, ಕಾಪು ಕ್ಷೇತ್ರದ 26 ಗ್ರಾಮ ಪಂಚಾಯತ್‍ಗಳನ್ನೂ ಗೆಲ್ಲುವ ನಿಟ್ಟಿನಲ್ಲಿ ಶ್ರಮ ವಹಿಸಬೇಕಿದೆ.ನಮ್ಮ ಜವಾಬ್ದಾರಿ ಹೆಚ್ಚಿದೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸುವುದರೊಂದಿಗೆ ಪಕ್ಷದ ಕೆಲಸವನ್ನೂ ಮಹತ್ವ ನೀಡಿ ಮಾಡಬೇಕಿದೆ. ಗ್ರಾಮ ಪಂಚಾಯತ್ ಚುನಾವಣೆಗೆ ಉಸ್ತುವಾರಿ ವಹಿಸಿಕೊಂಡಿರುವ ಪ್ರಮುಖರು ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಬೇಕಿದೆ ಎಂದರು.
ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ತಾಲೂಕು ಪಂಚಾಯತ್ ಚುನಾವಣೆಯನ್ನು ತಡೆಯಲು ಕಾಂಗ್ರೆಸ್ ಪ್ರಯತ್ನ ಮಾಡಿದ್ದು, ಅದಕ್ಕೆ ನ್ಯಾಯಾಲಯದಲ್ಲಿ ಸೋಲಾಗಿದೆ. ಎಲ್ಲಾ ವರ್ಗದವರಿಗೂ ಉತ್ತಮ ಅವಕಾಶಗಳನ್ನು ಒದಗಿಸುವ ಮೂಲಕ ಬಿಜೆಪಿ ಸರ್ವ ವ್ಯಾಪಿ - ಸರ್ವ ಸ್ಪರ್ಷಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದರ ಜೊತೆಗೆ, ಪಕ್ಷ ಸಂಘಟನೆಗೂ ವಿಶೇಷ ಒತ್ತು ನೀಡುವ ಅಗತ್ಯವಿದೆ ಎಂದರು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ಕಾಪು ಮಂಡಲ ಪ್ರಭಾರಿ ಯಶ್ ಪಾಲ್ ಸುವರ್ಣ, ಬಿಜೆಪಿ ಹಿರಿಯ ಮುಖಂಡ ಸುರೇಶ್ ಶೆಟ್ಟಿ ಗುರ್ಮೆ, ಕಾಪು ಬಿಜೆಪಿ ಅದ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ, ಪುರಸಭಾ ವ್ಯಾಪ್ತಿ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು, ಮಹಿಳಾ ಮೋರ್ಚಾದ ಕ್ಷೇತ್ರಾಧ್ಯಕ್ಷೆ ಸುಮಾ ಶೆಟ್ಟಿ, ಬಿಜೆಪಿ ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಉಪಸ್ಥಿತರಿದ್ದರು.
Kshetra Samachara
04/11/2020 01:05 pm