ಉಡುಪಿ : ಕುಂದಾಪುರ ಪುರಸಭೆಯ 9ನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ವೀಣಾ ಭಾಸ್ಕರ, ಉಪಾಧ್ಯಕ್ಷರಾಗಿ ಸಂದೀಪ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನ.3ರಂದು ಅಧ್ಯಕ್ಷರ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದು ಬಿಜೆಪಿಯ ಒಮ್ಮತ ಅಭ್ಯರ್ಥಿಗಳಾಗಿ ಅಧ್ಯಕ್ಷ ಸ್ಥಾನಕ್ಕೆ ವೀಣಾ ಭಾಸ್ಕರ, ಉಪಾಧ್ಯಕ್ಷ ಸ್ಥಾನಕ್ಕೆ ಸಂದೀಪ್ ಖಾರ್ವಿ ಅವರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡರು.ಈ ಸಂದರ್ಭದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ,ಭಾಗಿಯಾಗಿದ್ದರು.
ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಆನಂದಪ್ಪ ನಾಯಕ್ ಸಹಕರಿಸಿದರು. ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಈ ಸಂದರ್ಭದಲ್ಲಿ ಹಾಜರಿದ್ದರು. ಪುರಸಭೆ ಸದಸ್ಯರಾದ ಮೋಹನದಾಸ ಶೆಣೈ, ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಗಿರೀಶ್ ಅಭಿನಂದಿಸಿ ಮಾತನಾಡಿದರು.ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಎ’ ಪ್ರವರ್ಗಕ್ಕೆ ಮೀಸಲಾಗಿತ್ತು. ಒಟ್ಟು 23 ಸದಸ್ಯಬಲ ಇರುವ ಪುರಸಭೆಯಲ್ಲಿ 14 ಬಿಜೆಪಿ, 8 ಕಾಂಗ್ರೆಸ್, 1 ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷೆತಯಾಗಿರುವ ವೀಣಾ ಭಾಸ್ಕರ ಟಿ.ಟಿ ರೋಡ್ ವಾರ್ಡ್ ಪ್ರತಿನಿಧಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಂದೀಪ್ ಖಾರ್ವಿ ಬಹದ್ದೂರ್ ಷಾ ರೋಡ್ ವಾರ್ಡ್‍ನ್ನು ಪ್ರತಿನಿಧಿಸುತ್ತಿದ್ದಾರೆ.
Kshetra Samachara
04/11/2020 05:32 pm