ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಸಭೆ ಪೇಟೆಯಲ್ಲಿ ನಡೆಯಿತು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿ ಮತ್ತು ಆಡಳಿತ ವೈಫಲ್ಯದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಯಿತು.

58 ಕೋಟಿ ರೂ.ನ ಕುಡಿಯುವ ನೀರು ಶುದ್ಧೀಕರಣ ಘಟಕ ನಿರ್ಮಾಣದ ಹಕ್ಕನ್ನು ಕಸಿದುಕೊಂಡ ಸ್ಥಳೀಯ ಶಾಸಕರ ನಡೆಗೆ ಪ್ರತಿಭಟನೆಕಾರರು ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಕೋವಿಡ್-19 ನಿರ್ವಹಣೆಯಲ್ಲೂ ಸರಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾ ಉಪಕರಣ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಗುಡುಗಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

04/11/2020 06:43 pm

Cinque Terre

14.63 K

Cinque Terre

2

ಸಂಬಂಧಿತ ಸುದ್ದಿ