ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಬಿಜೆಪಿ ಎಸ್ ಸಿ ಮೋರ್ಚಾ ಜಿಲ್ಲಾ ಮಟ್ಟದ ಪ್ರಮುಖರ ಸಭೆ

ಉಡುಪಿ: ಅಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಎಸ್.ಸಿ. ಸಮುದಾಯ ರಾಜ್ಯದಲ್ಲೇ ಅತಿ ಹೆಚ್ಚು ಜನ ಸಂಖ್ಯೆ ಹೊಂದಿದೆ ಎಂಬುದು ಕಂಡು ಬಂದಿದೆ ಎಂದು ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಹೇಳಿದರು.

ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಎಸ್ ಸಿ ಮೋರ್ಚಾದ ಜಿಲ್ಲಾ ಮಟ್ಟದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. "ರಾಜ್ಯದಲ್ಲಿ ನಡೆದ ಜಾತಿ ಸಮೀಕ್ಷೆಯ ಎಲ್ಲಾ ಮಾಹಿತಿ ಬಹಿರಂಗ ಆಗದೇ ಇದ್ದರೂ ಕೂಡ ಇದರ ಪ್ರಮುಖ ಕೆಲವೊಂದು ಸಂಗತಿಗಳು ಸಾರ್ವಜನಿಕರಿಗೆ ತಿಳಿದಿವೆ.

ಇದರಲ್ಲಿ ಪ್ರಮುಖ ವಿಷಯ ಎಸ್ ಸಿ ಸಮುದಾಯ ಕರ್ನಾಟಕದ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿ ಇರುವುದು. ಇದರರ್ಥ ರಾಜ್ಯದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಆಗಿರಬಹುದು, ವೋಟ್ ಬ್ಯಾಂಕ್ ನಲ್ಲಿ ಕೂಡ ನಮ್ಮ ಸಮುದಾಯ ನಿರ್ಣಾಯಕವಾಗಿದೆ" ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ "ಶ್ರಮದ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಎಸ್.ಸಿ. ಸಮುದಾಯ ಪ್ರಮುಖವಾಗಿದೆ.

ನಮ್ಮ ರಾಜ್ಯದಲ್ಲಿ ಆಯಾಯ ಸಮುದಾಯ, ಪಂಗಡಗಳ ಕುರಿತಾಗಿ ಕಾರ್ಯ ನಿರ್ವಹಿಸಲು ಮೋರ್ಚಾಗಳನ್ನು ರಚನೆ ಮಾಡಲಾಗಿದೆ. ಛಲವಾದಿ ನಾರಾಯಣ ಸ್ವಾಮಿಯವರು ರಾಜ್ಯ ರಾಜಕಾರಣದಲ್ಲಿ ಎಲ್ಲಾ ನಾಯಕರಿಂದ ಗೌರವವನ್ನು ಪಡೆದಿರುವ ವ್ಯಕ್ತಿ .ಇದಕ್ಕೆ ಅವರ ನಿರಂತರ ಶ್ರಮ, ಹೋರಾಟ ಕಾರಣ" ಎಂದರು.

ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ದಿನಕರ್ ಬಾಬು, ಜಿಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳೆಂಜಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

04/11/2020 08:15 pm

Cinque Terre

8.55 K

Cinque Terre

0

ಸಂಬಂಧಿತ ಸುದ್ದಿ