ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಸಚಿವ ಜೋಶಿ

ಮಂಗಳೂರು: ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದರು.

ವಿಮಾನ ಮೂಲಕ ಮಂಗಳೂರಿಗೆ ಆಗಮಿಸಿದ ಜೋಶಿಯವರನ್ನು ಬಿಜೆಪಿ ಮುಖಂಡರು ಸ್ವಾಗತಿಸಿದರು.

ಇದೇ ವೇಳೆ ಸಿಎಂ BSY ಬದಲಾವಣೆ ಕುರಿತ ಸಿದ್ದು ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಂತಹ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ. ಯಡಿಯೂರಪ್ಪನವರು ಚೆನ್ನಾಗಿ ಕೆಲಸ ಮಾಡ್ತಿದ್ದಾರೆ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು.

ಇದೇ ವೇಳೆ ಮದುವೆಗಾಗಿ ಮತಾಂತರ ವಿರುದ್ಧ ಕಾಯ್ದೆ ವಿಚಾರದ ಕುರಿತು ಮಾತನಾಡಿದ ಅವರು, ಸಿಟಿ ರವಿ ಹೇಳಿಕೆಗೆ ಕೇಂದ್ರ ಸಚಿವ ಜೋಶಿ ಬೆಂಬಲ ವ್ಯಕ್ತಪಡಿಸಿದರು. ಉಚ್ಛ ನ್ಯಾಯಾಲಯದ ಹೇಳಿಕೆ ನಂತರ ಈ ವಿಚಾರ ಚರ್ಚೆಗೆ ಬಂದಿದೆ. ವಿವಿಧ ರಾಜ್ಯ ಸರಕಾರಗಳು ಈಗಾಗಲೇ ಕ್ರಮಕ್ಕೆ ಮುಂದಾಗಿದೆ ಅಂದರು.

Edited By : Nagesh Gaonkar
Kshetra Samachara

Kshetra Samachara

04/11/2020 08:23 pm

Cinque Terre

18.98 K

Cinque Terre

5

ಸಂಬಂಧಿತ ಸುದ್ದಿ