ಉಡುಪಿ: ಉಡುಪಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಖಾಝಿಯಾಗಿದ್ದ ತಾಜುಲ್ ಫುಖಹಾ ಬೇಕಲ್ ಉಸ್ತಾದ್ ವಿಯೋಗದಿಂದ ತೆರವಾದ ಖಾಝಿ ಸ್ಥಾನಕ್ಕೆ ಹಿರಿಯ ಮುಸ್ಲಿಂ ವಿದ್ವಾಂಸ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾಹಿತಿ ನೀಡಿದ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ , ಇದೇ ತಿಂಗಳ 10 ರಂದು ಬೆಳಿಗ್ಗೆ ಹತ್ತು ಗಂಟೆಗೆ ಕೇಂದ್ರ ಮಸೀದಿ ಮೂಳೂರಿನಲ್ಲಿ ನೂತನ ಖಾಝಿ ಅಬ್ದುಲ್ ಮುಸ್ಲಿಯಾರ್ ಮಾಣಿ ಉಸ್ತಾದ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಸಾದಾತುಗಳು,ಉಲಮಾಗಳು ಉಮರಾ ನಾಯಕರು ಮತ್ತು ಮುಸ್ಲಿಂ ವಿದ್ವಾಂಸರು ಭಾಗವಹಿಸಲಿದ್ದಾರೆ.
ಸಾಮಾಜಿಕ ಜೀವನದಲ್ಲಿ ಭಿನ್ನಾಭಿಪ್ರಾಯ, ವಾಗ್ವಾದ ಬಗೆಹರಿಸಲು ಖಾಝಿಯವರು ಪ್ರಮುಖ ಪಾತ್ರ ವಹಿಸುತ್ತಾರೆ. ತ್ವಲಾಖ್, ಫಸ್ಕ್, ಮತ್ತಿತರ ಧಾರ್ಮಿಕ ಕಾರ್ಯಗಳಲ್ಲಿ ಖಾಝಿಯವರ ತೀರ್ಮಾನ ಬಹಳ ಪ್ರಮುಖ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಸಂಘಟನಾ ಕಾರ್ಯದರ್ಶಿ ಜಿಲ್ಲಾ ಸುನ್ನಿ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ, ಕಾಪು ಉಸ್ತಾದ್ ಅಹ್ಮದ್ ಖಾಸಿಮಿ, ಹಾಜಿ ಪಿ. ಅಬೂಬಕ್ಕರ್ ನೇಜಾರು ಅಧ್ಯಕ್ಷರು ಸುನ್ನಿ ಸಂಯುಕ್ತ ಜಮಾಅತ್ ಉಡುಪಿ ಜಿಲ್ಲೆ ಹಾಗೂ ಇತರರು ಉಪಸ್ಥಿತರಿದ್ದರು.
Kshetra Samachara
05/10/2020 06:28 pm