ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಿರಿ ಧಾನ್ಯ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಇಂದು ಸಿರಿ ಧಾನ್ಯ ವರ್ಷಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು.ಮೂವರು ಕೃಷಿಕ ಮಹಿಳೆಯರ ಉಡಿ ತುಂಬುವ ಮೂಲಕ ಸಚಿವರು ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ವಿಶೇಷವಾಗಿತ್ತು.ಕಾರ್ಯಕ್ರಮದಲ್ಲಿ ಸಿರಿಧಾನ್ಯ ಮತ್ತು ಉತ್ಪನ್ನಗಳ ಬೃಹತ್ ಪ್ರದರ್ಶನ ಏರ್ಪಡಿಸಲಾಗಿದೆ.ಉದ್ಘಾಟನೆ ಬಳಿಕ ಸಚಿವರು ಸ್ಮರಣಾರ್ಥ ಕೃಷಿ ಸಂಶೋಧನಾ ಕೇಂದ್ರದಲ್ಲಿ ಗಿಡ ನೆಟ್ಟು ನೀರೆರೆದರು.ಈ ವೇಳೆ ಶಾಸಕರು ,ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿಕರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

17/09/2021 03:51 pm

Cinque Terre

8.4 K

Cinque Terre

0