ಮಂಗಳೂರು: ಯೋಗಿಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸಿಬಿಐ ವಶ ಕುರಿತು ಮಂಗಳೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ಕಾಲದಲ್ಲಿ ಅಧಿಕಾರ, ಹಣ ಉಪಯೋಗಿಸಿ ಕೊಲೆ, ಸುಲಿಗೆಯಾಗುತ್ತಿತ್ತು. ಅದೇ ಸರ್ಕಾರ ಯಾವಾಗಲೂ ಇರುತ್ತೆ ಅಂತಾ ಹೇಳೋಕೆ ಆಗಲ್ಲ. ವಿನಯ್ ಕುಲಕರ್ಣಿ ಯನ್ನು ಸಿಬಿಐ ವಶಕ್ಕೆ ಪಡೆದಿದೆ ಸಿಬಿಐಯ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಸಿಬಿಐ ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲಿದೆ ಎಂದ ಅವರು ತನಿಖೆಯಲ್ಲಿ ವಿನಯ್ ಕುಲಕರ್ಣಿ ನಿರಪರಾಧಿಯಾಗಿ ಹೊರಬಂದರೆ ತುಂಬಾ ಖುಷಿಯಾಗುತ್ತದೆ. ಯಾವುದೇ ಕಾರಣಕ್ಕೂ ವಿನಯ್ ಕುಲಕರ್ಣಿಯನ್ನು ಬಿಜೆಪಿಗೆ ಸೇರಿಸಿಕೊಳ್ಳೋದಿಲ್ಲ ಎಂದು ಸ್ಪಷ್ಟನೆ ನೀಡಿದರು.
Kshetra Samachara
05/11/2020 09:50 am