ಮಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಸಿ.ಎಂ ಬಿಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.ವಿನಯ್ ಕುಲಕರ್ಣಿ ಅಪರಾಧಿ ಸ್ಥಾನದಲ್ಲಿದ್ದಾರೆ. ಈ ಕಾರಣದಿಂದ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಸಿಬಿಐಗೆ ಸಾಕ್ಷ್ಯಧ್ಯಾರ ಸಿಕ್ಕಿರುವುದರಿಂದ ವಶಕ್ಕೆ ಪಡೆದಿದ್ದಾರೆ. ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆ.
ಈಗಲಾದರೂ ನ್ಯಾಯ ಸಿಕ್ಕಿದೆ. ಎಂಬುದೇ ನಮ್ಮ ಅಭಿಪ್ರಾಯ ಎಂದರು. ಇನ್ನು ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು ಅಂತಾ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Kshetra Samachara
05/11/2020 11:01 am