ಮಂಗಳೂರು: ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮುಕ್ತಾಯಗೊಂಡಿದೆ. ಏಕದಿನದ ಕಾರ್ಯಕಾರಿಣಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಅರವಿಂದ ಲಿಂಬಾವಳಿ, ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಡಿ.ವಿ. ಸದಾನಂದಗೌಡ ಸಹಿತ ಬಿಜೆಪಿ ಹಿರಿಯ ನಾಯಕರು ಭಾಗವಹಿಸಿದ್ದರು.
ಸಭಾಂಗಣದಲ್ಲಿ ಕಾರ್ಯಕಾರಿಣಿ ಹಾಗೂ ಖಾಸಗಿ ಹೋಟೆಲ್ ನಲ್ಲಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆ ಅಂತ್ಯಗೊಂಡ ಬಳಿಕ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ಹಿರಿಯ ನಾಯಕರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣಿಸಿದರು. ಸಿಎಂ ಜೊತೆಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡ ಇದ್ದರು.
Kshetra Samachara
05/11/2020 07:07 pm