ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ರಾತ್ರಿ ಉಡುಪಿ ಶ್ರೀ ಕೃಷ್ಣಮಠಕ್ಜೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಸಚಿವ ಈಶ್ವರಪ್ಪ ಅವರು ಮಠದಲ್ಲಿ ಪರ್ಯಾಯ ಅದಮಾರು ಶ್ರೀಗಳನ್ನು ಭೇಟಿ ಮಾಡಿದರು. ಶ್ರೀಗಳಿಂದ ಮಂತ್ರಾಕ್ಷತೆ ಪಡೆದು, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಜೊತೆ ಸಮಾಲೋಚನೆ ನಡೆಸಿದರು.
ಕನಕನ ಕಿಂಡಿಯ ಮೂಲಕ ಕೃಷ್ಣನ ದರ್ಶನ ಪಡೆದ ಸಚಿವರು, ಬಳಿಕ ರಥಬೀದಿಯಲ್ಲಿ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡಿದರು.
ಶಾಸಕ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಪಿಆರ್ ಒ ಶ್ರೀಶ ಕಡೇಕಾರ್ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
05/11/2020 09:19 pm