ಉಡುಪಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಎಂದಿರುವ ಸಿದ್ದರಾಮಯ್ಯ ವಿರುದ್ಧ ಉಡುಪಿಯಲ್ಲಿ ಕಿಡಿ ಕಾರಿರುವ ಸಚಿವ ಕೆ.ಎಸ್ ಈಶ್ವರಪ್ಪ ,ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ.
ಮುಖ್ಯಮಂತ್ರಿ ಸ್ಥಾನ ಹೋದನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು? ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದ್ಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ? ನೀವು ಜನರ ಮಧ್ಯೆ ಹೋಗಿ ಕೆಲಸ ಮಾಡಿ.ನಾನು ದೇವಸ್ಥಾನದಲ್ಲಿ ಇದೀನಿ ,ಇಲ್ಲದಿದ್ದರೆ ಇನ್ನೂ ಕೆಟ್ಟ ಪದ ಹೇಳ್ತಿದ್ದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಗರಂ ಆದ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ,ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯ ವಿರುದ್ಧವೂ ಚಾಟಿ ಬೀಸಿದರು. ಸಿದ್ದರಾಮಯ್ಯ ನವರೇ ಹಾಗಾದರೆ ಕೊಲೆ ಪ್ರಕರಣವನ್ನು ತನಿಖೆ ಮಾಡಬಾರದೆ? ಹಾಗಾದ್ರೆ ಕೊಲೆಗೆ ಕಾಂಗ್ರೆಸ್ ಬೆಂಬಲ ಕೊಡುತ್ತಾ? ಸಿದ್ದರಾಮಯ್ಯ ಬೆಂಬಲ ಕೊಡುವುದಾದರೆ ಒಪ್ಪಿಕೊಂಡು ಬಿಡಲಿ.
ನಮ್ಮವರನ್ನೆಲ್ಲ ಜೈಲಿಗೆ ಕಳಿಸಿದ್ದು ಕೂಡಾ ರಾಜಕೀಯ ಪ್ರೇರಿತನಾ? ಬಾಯಿಗೆ ಬಂದಂತೆ ಮಾತನಾಡುವುದು ವಿರೋಧಪಕ್ಷದ ನಾಯಕನಿಗೆ ಶೋಭೆ ತರುವುದಿಲ್ಲ. ತಪ್ಪಿತಸ್ಥನಲ್ಲದಿದ್ದರೆ ಬಿಡುಗಡೆಯಾಗಿ ಹೊರಗೆ ಬರಲಿ. ಕಾಂಗ್ರೆಸ್‌ನ ದೋರಣೆಯನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
05/11/2020 09:28 pm