ಉಡುಪಿ: ಸಿಎಂ ಪುತ್ರ ವಿಜಯೇಂದ್ರ ಚುನಾವಣಾ ರಾಜಕೀಯಕ್ಕೆ ಬರುತ್ತಾರೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಚುನಾವಣೆ ಮತ್ತು ಪಕ್ಷ ಸಂಘಟನೆಯಲ್ಲಿ ವಿಜಯೇಂದ್ರ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.
ವಿಜಯೇಂದ್ರ ಚುನಾವಣೆ ರಾಜಕೀಯ ಪ್ರವೇಶ ಬಗ್ಗೆ ರಾಜ್ಯ ಮತ್ತು ಕೇಂದ್ರದ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಉಪಾಧ್ಯಕ್ಷರಾಗಿ ಅವರು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರವನ್ನು ವಿಜಯೇಂದ್ರ ಚೆನ್ನಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಸಂಘಟನಾತ್ಮಕ ಕೆಲಸದಲ್ಲಿ ವಿಜಯೇಂದ್ರ ಚೆನ್ನಾಗಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ವಿಜಯೇಂದ್ರ ರನ್ನು ಹೇಗೆ ಉಪಯೋಗಿಸಿಕೊಳ್ಳಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
Kshetra Samachara
06/11/2020 12:53 pm