ಮುಲ್ಕಿ: ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆಯಲ್ಲಿ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಖಂಡಿತ ಜಯ ಗಳಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಅವರು ಮುಲ್ಕಿ ನ.ಪಂ. ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನ ಆಯ್ಕೆ ಸಂಬಂಧ ತಮ್ಮ ಮತ ಚಲಾಯಿಸಿ ಮಾಧ್ಯಮದೊಂದಿಗೆ ಮಾತನಾಡಿದರು.
ಶಿರಾದಲ್ಲಿ ಸಿದ್ದರಾಮಯ್ಯ ಹಾಗೂ ಆರ್ ಆರ್ ನಗರ ದಲ್ಲಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ವಹಿಸಿಕೊಂಡು ಸಿದ್ದರಾಮಯ್ಯರನ್ನು ಸೋಲಿಸಬೇಕೆಂದು ಡಿಕೆಶಿ ಹಾಗೂ ಡಿಕೆಶಿ ಸೋಲಿಸಬೇಕೆಂದು ಸಿದ್ದರಾಮಯ್ಯನವರು ಒಳಗಿಂದೊಳಗೆ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಮುಂದಿನ ದಿನಗಳಲ್ಲಿ ಪಂಚಾಯತ್ ಚುನಾವಣೆಗಳಲ್ಲಿ ಕೂಡ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲವರ್ಧನೆ ಮಾಡಿ ಬಳಿಕ ನಡೆಯುವ ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದರು.
ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್, ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ಬಿಜೆಪಿ ಮುಖಂಡರಾದ ವಿನೋದ್ ಸಾಲ್ಯಾನ್ ಬೆಳ್ಳಾಯರು, ದೇವಪ್ರಸಾದ್ ಪುನರೂರು, ನವೀನ್ ರಾಜ್ ಮತ್ತಿತರರಿದ್ದರು.
Kshetra Samachara
06/11/2020 05:32 pm