ಕಾಪು: ಕಾಪು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಗೊಂದಲ ಉಂಟಾಗಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಲು ಮುಂದಾದ ಘಟನೆ ಶನಿವಾರ ನಡೆದಿದೆ.ಪುರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಬಳಿಕದ ಪ್ರಥಮ ಸಾಮಾನ್ಯ ಸಭೆಯು ಪುರಸಭಾಧ್ಯಕ್ಷ ಅನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಸಭೆಯ ಆರಂಭದಲ್ಲೇ ಸ್ಥಾಯಿ ಸಮಿತಿ ರಚನೆಯ ಬಗ್ಗೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಭಾರೀ ಚರ್ಚೆ ಮತ್ತು ವಾಗ್ವಾದ ನಡೆಯಿತು.
11 ಮಂದಿ ಸದಸ್ಯರನ್ನೊಳಗೊಂಡ ಸ್ಥಾಯಿ ಸಮಿತಿ ರಚನೆಗೆ ಬಿಜೆಪಿ 7 ಮತ್ತು ಕಾಂಗ್ರೆಸ್ ನಿಂದ 5 ಮಂದಿ ಸದಸ್ಯರ ಹೆಸರು ಸೂಚಿಚಿಸಲಾಗಿದ್ದು,ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡದೇ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಲು ಮುಂದಾದರು.ಈ ವೇಳೆ
ಬಿಜೆಪಿ ಸದಸ್ಯರು ಚುನಾವಣೆಗೆ ಪಟ್ಟು ಹಿಡಿದರು.ಬಳಿಕ ಕಾಂಗ್ರೆಸ್ ನ ಹಿರಿಯ ಸದಸ್ಯೆ ಸುಲೋಚನಾ ಬಂಗೇರ ತನ್ನ ಹೆಸರನ್ನು ಕೈ ಬಿಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಗೊಂಡಿತು. ಬಿಜೆಪಿಯ 7 ಮಂದಿ ಮತ್ತು ಕಾಂಗ್ರೆಸ್ ನಿಂದ 4 ಮಂದಿ ಸದಸ್ಯರನ್ನು ಸ್ಥಾಯಿ ಸಮಿತಿಗೆ ಆಯ್ಕೆ ಮಾಡಲಾಯಿತು.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್, ಉಪಾಧ್ಯಕ್ಷೆ ಮಾಲಿನಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಉಪಸ್ಥಿತರಿದ್ದರು.
Kshetra Samachara
07/11/2020 04:38 pm