ಬಂಟ್ವಾಳ: ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ. ಎರಡೂ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಬಂಟ್ವಾಳ ಪುರಸಭೆಯಲ್ಲಿ ಶನಿವಾರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ. ಮೊದಲೇ ಒಪ್ಪಂದ ಮಾಡಿಕೊಂಡಿದೆ ಎಂಬುದು ಇಲ್ಲಿ ಸ್ಪಷ್ಟವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್, ಎಸ್.ಡಿ.ಪಿ.ಐ. ಪರಸ್ಪರ ವಿರೋಧಿಗಳು ಎನ್ನಲಾಗುತ್ತಿತ್ತು. ಬಂಟ್ವಾಳದಲ್ಲೂ ಚುನಾವಣೆ ಪೂರ್ವದಲ್ಲಿ ಹೊಂದಾಣಿಕೆ ಮಾಡುವುದಿಲ್ಲ ಎಂದಿತ್ತು. ರಾಜಕೀಯ ನಿಜಬಣ್ಣವನ್ನು ಎರಡೂ ಪಕ್ಷಗಳು ಸ್ಪಷ್ಟವಾಗಿ ತೋರಿಸಿದ್ದು ಇಲ್ಲಿ ಕಂಡುಬಂದಿದೆ ಎಂದು ನಳಿನ್ ಹೇಳಿದರು.ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅವರು ಅಭಿನಂದನೆ ಸಲ್ಲಿಸಿದರು.
Kshetra Samachara
07/11/2020 05:29 pm