ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣ ವಿರೋಧಿಸಿ ದಕ್ಷಿಣ ಕನ್ನಡ
ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು.ಬಜ್ಪೆಯ ಕೆಂಜಾರು ಬಳಿ ತ್ರಿ ಒನ್ ತ್ರಿ ಫ್ಲ್ಯಾಟ್ ಎದುರುಗಡೆ ನಡೆದ ಪ್ರತಿಭಟನೆಯಲ್ಲಿ ನೂರಾರು ಮಂದಿ ಪ್ರತಿಭಟನಾಕಾರರು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಎಎಐ ಅಧೀನದಲ್ಲಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿದರು.
ಮಾಜಿ ಸಚಿವ ರಮಾನಾಥ ರೈ , ಮಾಜಿ ಶಾಸಕ ಜೆ.ಆರ್. ಲೋಬೊ, ದ.ಕ. ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
09/11/2020 12:31 pm