ಮಂಗಳೂರು: ಶಿರಾ ಹಾಗೂ ಆರ್ ಆರ್ ನಗರ ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪಿವಿಎಸ್ ಸರ್ಕಲ್ ಬಳಿ ಇರುವ ಬಿಜೆಪಿ ಕಚೇರಿ ಎದುರು ಸಂಭ್ರಮಾಚರಣೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
Kshetra Samachara
10/11/2020 02:56 pm