ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿ; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಶಿರ್ವ: ಬಿಜೆಪಿ ಸರ್ಕಾರದ ರೈತ ವಿರೋಧಿ, ಜನವಿರೋಧಿ ನೀತಿ ವಿರುದ್ಧ ಉಡುಪಿ ಜಿಲ್ಲೆ ಶಿರ್ವ ಪೇಟೆಯಲ್ಲಿ ಬೃಹತ್ ಪ್ರತಿಭಟನೆ, ಜಾಥಾ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಜಾಥಾದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾದರು. ಈ ವೇಳೆ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಬಿಜೆಪಿ ದೇಶದ ಸರಕಾರಿ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಮಂಗಳೂರಿನ ವಿಮಾನ ನಿಲ್ದಾಣವನ್ನೂ ಅದಾನಿಗೆ ನೀಡಿದೆ. ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಮುಚ್ಚುವ ಹುನ್ನಾರ ನಡೆಸಿದ್ದು, ಈ ಮೂಲಕ ತನ್ನ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದರು.

ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಮಾತನಾಡಿ, ಕೊರೊನಾ ಸಂದರ್ಭ ದಲ್ಲೂ ರಾಜ್ಯ ಸರಕಾರ ಬಡವರ ಎರಡು ಸಾವಿರ ಕೋಟಿ ಲೂಟಿ ಮಾಡಿದೆ. ರಾಜ ವ್ಯಾಪಾರಿಯಾದರೆ ಪ್ರಜೆಗಳು ಭಿಕಾರಿಯಾಗುತ್ತಾರೆ. ಬಿಜೆಪಿ ಸರಕಾರ ಬಡವರ ಭೂಮಿ ಕಸಿದು ಕೊಂಡಿದ್ದು, ಸರಕಾರದ ವಿರುದ್ಧ ಧ್ವನಿ ಎತ್ತಿದವರನ್ನು ದೇಶದ್ರೋಹಿಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದೆ ಎಂದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ,ಐವನ್ ಡಿಸೋಜ, ಗೀತಾ ವಾಗ್ಲೆ,ಜ್ಯೋತಿ ಹೆಬ್ಬಾರ್,ನವೀನ್ ಚಂದ್ರ ಜೆ. ಶೆಟ್ಟಿ, ಶಿವಾಜಿ ಸುವರ್ಣ, ವಿಲ್ಸನ್ ರೋಡ್ರಿಗಸ್,ಅಖಿಲೇಶ್, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

10/11/2020 06:10 pm

Cinque Terre

9.49 K

Cinque Terre

1

ಸಂಬಂಧಿತ ಸುದ್ದಿ