ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹರಿಕೃಷ್ಣ ಬಂಟ್ವಾಳ್ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ನಿಂದ ಬಂಟ್ವಾಳ ನಗರ ಠಾಣೆಗೆ ದೂರು

ಬಂಟ್ವಾಳ: ಬಿಜೆಪಿ ಪಕ್ಷದ ಕುಟುಂಬ ಮಿಲನ ಕಾರ್ಯಕ್ರಮವೊಂದರಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶರತ್ ಮಡಿವಾಳ ಹತ್ಯೆಯಲ್ಲಿ ಪಾಲ್ಗೊಂಡವರು ಎಂಬಂತೆ ಬಿಂಬಿಸುವ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿದ್ದು, ಪ್ರಚೋದನಕಾರಿ ಭಾಷಣ ಮಾಡಿದ ಹರಿಕೃಷ್ಣ ಬಂಟ್ವಾಳ ಅವರನ್ನು ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪಕ್ಷ ಮೆರವಣಿಗೆ ಮೂಲಕ ಬಂಟ್ವಾಳ ನಗರ ಠಾಣೆಗೆ ಸಾಗಿ ಮನವಿ ಸಲ್ಲಿಸಿದೆ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಈ ಕುರಿತು ಬಂಟ್ವಾಳ ನಗರ ಠಾಣಾಧಿಕಾರಿಗೆ ದೂರು ನೀಡಿದ್ದು, ಬಿಜೆಪಿಯ ಕಾರ್ಯಕ್ರಮವೊಂದರಲ್ಲಿ ಶಾಸಕ ರಾಜೇಶ್ ನಾಯ್ಕ್ ಉಪಸ್ಥಿತಿಯಲ್ಲಿ ಹರಿಕೃಷ್ಣ ಬಂಟ್ವಾಳ್ ಭಾಷಣ ಮಾಡುವಾಗ, ರೈ ಅವರನ್ನು ಕೊಲೆಗಾರರಂತೆ ಬಿಂಬಿಸಿದ್ದು, ವಾಟ್ಸಾಪ್ ಮತ್ತು ಫೇಸ್ ಬುಕ್ ನಲ್ಲಿದ್ದು, ಇದರಿಂದ ರೈ ಘನತೆಗೆ ಧಕ್ಕೆ ಉಂಟಾಗಿದ್ದು, ಪ್ರಾಣಭಯ ಇದೆ. ಈಗಾಗಲೇ ಶರತ್ ಹತ್ಯೆ ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿಕೊಂಡಿದ್ದು, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ತನಿಖೆಯಲ್ಲಿರುವಾಗ ಈ ರೀತಿ ಆಪಾದನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಕೆ ವೇಳೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ ಸಹಿತ ಕಾಂಗ್ರೆಸ್ ಪಕ್ಷದ ವಿವಿಧ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.,

Edited By : Manjunath H D
Kshetra Samachara

Kshetra Samachara

10/11/2020 06:20 pm

Cinque Terre

16.11 K

Cinque Terre

1

ಸಂಬಂಧಿತ ಸುದ್ದಿ