ಮುಲ್ಕಿ: ಕರ್ನಾಟಕದ ಶಿರಾ, ರಾಜರಾಜೇಶ್ವರಿ ಕ್ಷೇತ್ರ ಹಾಗೂ ಬಿಹಾರ ಸಹಿತ ದೇಶದ ನಾನಾ ಕಡೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ ಸಂಭ್ರಮದಲ್ಲಿ ಸುರತ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಿಹಿತಿಂಡಿ ವಿತರಿಸಿದರು.
ಈ ಸಂದರ್ಭ ಸುರತ್ಕಲ್ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಮಹೇಶ್ ಮೂರ್ತಿ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ದುರಾಡಳಿತದ ಫಲವಾಗಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಕಳೆದ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಹಾಗೂ ಹಲ್ಲೆ ನಡೆದಿದ್ದು ಅದಕ್ಕೆ ತಕ್ಕ ಪ್ರತ್ಯುತ್ತರ ಮತದಾರರು ನೀಡಿದ್ದಾರೆ. ಈ ಫಲಿತಾಂಶ ಮುಂದಿನ ಗ್ರಾಪಂ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು. ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಜೊತೆ ಕೈ ಕೈಜೋಡಿಸಿ ಉತ್ತಮ ಆಡಳಿತ ನೀಡಿದ್ದು ಚುನಾವಣಾ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಮುಂದೆ ನಡೆಯುವ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿಯೂ ಬಿಜೆಪಿ ಭರ್ಜರಿ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Kshetra Samachara
11/11/2020 11:49 am