ಉಡುಪಿ: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮೇಯರ್ ಸಂಪತ್ ರಾಜ್ ತಲೆ ಮರೆಸಿಕೊಂಡ ವಿಚಾರವಾಗಿ ಉಡುಪಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇದಕ್ಕೆ ಉತ್ತರ ಕೊಡಬೇಕು ಎಂದಿರುವ ನಳಿನ್, ಘಟನೆಯಲ್ಲಿ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.ಡಿ.ಕೆ. ಶಿವಕುಮಾರ್ ಗೆ ನೈತಿಕತೆ ಇದ್ದರೆ ಸಂಪತ್ ರಾಜ್ ಶರಣಾಗುವಂತೆ ಹೇಳಲಿ. ಸಂಪತ್ ರಾಜ್ ನನ್ನು ಪೊಲೀಸರ ಕೈಗೆ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡಬೇಕು.
ಅಖಂಡ ಶ್ರೀನಿವಾಸ ಮೂರ್ತಿ ಅವರನ್ನು ಬಿಜೆಪಿ ಬೆಂಬಲಿಸುತ್ತದೆ.ಅಖಂಡ ಶ್ರೀನಿವಾಸಮೂರ್ತಿ ಗೆ ಭಾರತೀಯ ಜನತಾ ಪಾರ್ಟಿ ನ್ಯಾಯ ಕೊಡಿಸುತ್ತದೆ ಎಂದರು.
Kshetra Samachara
12/11/2020 12:37 pm