ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣ ವಿರೋಧಿಸಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ, ತುಳುನಾಡ ಸಾಧಕರ ಹೆಸರನ್ನು ನಿಲ್ದಾಣದ ಮರು ನಾಮಕರಣಕ್ಕೆ ಒತ್ತಾಯಿಸಿ ಯೂತ್ ಕಾಂಗ್ರೆಸ್ ದ.ಕ. ಜಿಲ್ಲಾಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಯಿತು.
ಬಜಪೆ ಬಳಿಯ ಕೆಂಜಾರುವಿನಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿ ಸಾಥ್ ನೀಡಿದರು.
ಅಲ್ಲದೆ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅದಾನಿ ಕಂಪೆನಿಗೆ ವಿಮಾನ ನಿಲ್ದಾಣ ಗುತ್ತಿಗೆ ವಹಿಸಿದ್ದನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾರ್ಪೊರೇಟರ್ ಎ.ಸಿ. ವಿನಯ್ ರಾಜ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
12/11/2020 05:36 pm