ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆಯಂಗಡಿ: ಬಿಜೆಪಿಗರು ಸುಳ್ಳನ್ನು ಸತ್ಯ ಮಾಡುವುದರಲ್ಲಿ ನಿಸ್ಸೀಮರು: ಸತೀಶ್ ಜಾರಕಿಹೊಳಿ

ಮುಲ್ಕಿ: ಕೇಂದ್ರ ಸರಕಾರ ಸರಕಾರಿ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದ್ದು, ಯುವ ಸಮುದಾಯಕ್ಕೆ ಉದ್ಯೋಗ ನೀಡುವ ಬದಲು ದೇಶದಲ್ಲಿ 2 ಕೋಟಿ ನಿರುದ್ಯೋಗ ಸೃಷ್ಟಿ ಮಾಡಿದೆ. ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾರ್ಯಕರ್ತರಿಗೆ ಕೇಡರ್ ತರಬೇತಿ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಅವರು ಹಳೆಯಂಗಡಿಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಂದಿನ ದಿನಗಳಲ್ಲಿ ಪಕ್ಷವನ್ನು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಪ್ರಯತ್ನ ಸಾಗಿದ್ದು, ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಂದಿನ ಗ್ರಾಪಂ, ತಾಲೂಕು, ಜಿಪಂ ಚುನಾವಣೆಗೆ ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ.

ಹೆಚ್ಚಿನ ಗ್ರಾಪಂ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಹಾರ ಹಾಗೂ ರಾಜ್ಯದ ಉಪ ಚುನಾವಣೆ ಸೋಲಿನ ಬಗ್ಗೆ ಮಾತನಾಡಿದ ಅವರು, ಬಿಜೆಪಿಗರು ಸುಳ್ಳನ್ನು ಸತ್ಯ ಮಾಡುವುದರಲ್ಲಿ ನಿಸ್ಸೀಮ ರಾಗಿದ್ದು ಹಣ, ಅಧಿಕಾರ ಬಲದಿಂದ ಗೆಲುವನ್ನು ಸಾಧಿಸಿದೆ ಎಂದರು.

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಕೆಲವು ಕಾರಣಗಳಿಂದ ಕಾಂಗ್ರೆಸ್ ಸೋಲನ್ನು ಅನುಭವಿಸಿದ್ದು, ಮುಂದಿನ ಚುನಾವಣೆಯಲ್ಲಿ ಕಾರ್ಯಕರ್ತರಲ್ಲಿ ಹುರುಪನ್ನು ಮೂಡಿಸುವ ಅಗತ್ಯವಿದೆ.

ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸಿ ಪಕ್ಷವನ್ನು ಗೆಲುವಿಗೆ ತರಲು ಪ್ರಯತ್ನಿಸಬೇಕೆಂದರು. ಮಂಗಳೂರು ವಿಮಾನ ನಿಲ್ದಾಣವನ್ನು ಅದಾನಿ ಸಂಸ್ಥೆಗೆ ಮಾರಾಟ ಮಾಡಿದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಮುಂದೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದರು. ಈ ಸಂದರ್ಭ ಮುಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು.

ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ,ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ ಬೆರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

13/11/2020 09:14 pm

Cinque Terre

11.97 K

Cinque Terre

1

ಸಂಬಂಧಿತ ಸುದ್ದಿ