ಮಂಗಳೂರು: ಸಚಿವ ಸ್ಥಾನಕ್ಕೆ ಯಾವುದೇ ಪೈಪೋಟಿ ಇಲ್ಲ. ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ಪರಮಾಧಿಕಾರ. ಸದ್ಯ ಏಳು ಸಚಿವ ಸ್ಥಾನ ಖಾಲಿ ಇದ್ದು, ಸಿಎಂ ಯಡಿಯೂರಪ್ಪನವರು ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಮಂಗಳೂರಲ್ಲಿ ಮಾತನಾಡಿದ ಅವರು, ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚುನಾವಣೆ ಇತ್ತು. ಅದಕ್ಕೆ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ, ಉಮೇಶ್ ಕತ್ತಿ, ಸವದಿ ಸೇರಿ ಸಭೆ ನಡೆಸಿದ್ದೆವು.ಈ ಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಬಗ್ಗೆ ಮಾತ್ರ ಚರ್ಚೆ ನಡೆದಿದೆ ಹೊರತು ಬೇರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇನ್ನು ಯಾರಿಗೆ ಸಚಿವ ಸ್ಥಾನ ಕೊಡಬೇಕೋ ಎಂಬುದರ ಬಗ್ಗೆ ಹೈಕಮಾಂಡ್ ಗೆ ಗೊತ್ತಿದೆ. ಪಂಚಾಯತ್ ಚುನಾವಣೆ ಬಳಿಕ ಸ್ಪಷ್ಟತೆ ಸಿಗಲಿದೆ ಎಂದರು.
Kshetra Samachara
15/11/2020 03:00 pm