ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಉಡುಪಿ: ಯುವಜನರಲ್ಲಿ ಜವಾಹರ್ ಲಾಲ್ ನೆಹರು, ಗಾಂಧೀಜಿಯವರ ಚಿಂತನೆಗಳು ನಶಿಸಿ ಹೋಗುವ ಪ್ರಸ್ತುತ ಪರಿಸ್ಥಿತಿಯಲ್ಲಿ ಇವರ ವಿಚಾರಗಳನ್ನು ಪ್ರಚುರಪಡಿಸಲು ಕಾಂಗ್ರೆಸ್ ಪಕ್ಷ ಕಾರ್ಯನಿರ್ವಹಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಉಡುಪಿಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು "ರಾಜ್ಯದ ಅಧ್ಯಕ್ಷ್ಯರು ನನಗೆ ಪಕ್ಷದ ಕಾರ್ಯಕರ್ತರಿಗೆ ತರಬೇತಿ ನೀಡುವ ಜವಾಬ್ದಾರಿಯನ್ನು ನೀಡಿದ್ದಾರೆ.

ನಮ್ಮ ಪಕ್ಷ ಈ ಮೊದಲು ಮಾಸ್ ಬೇಸ್ ಆಗಿತ್ತು, ಇದೀಗ ಅದನ್ನು ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಅಗತ್ಯ ಇದೆ. ಪ್ರತಿಯೊಂದು ಕಡೆಗಳಲ್ಲಿ ಪಕ್ಷದ ಒಳಗೆ ಆಂತರಿಕವಾಗಿ ಸಮಸ್ಯೆಗಳು ಇರುತ್ತವೆ, ಕಾರ್ಯಕರ್ತರು ನಮ್ಮ ಗಮನಕ್ಕೆ ತಂದಲ್ಲಿ ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಹರಿಸುವ ಕೆಲಸವನ್ನು ನಾವು ಮಾಡಲಿದ್ದೇವೆ.

ಸೇವಾದಳವನ್ನು ಗಟ್ಟಿಗೊಳಿಸಬೇಕು. ಮುಂದಿನ ದಿನಗಳಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಪಿವಿ ಮೋಹನ್, ರಾಜ್ಯ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್, ಮೆಹರೂಜ್ ಖಾನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ ಹಾಗೂ ಇತರರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

15/11/2020 07:55 pm

Cinque Terre

21.48 K

Cinque Terre

4

ಸಂಬಂಧಿತ ಸುದ್ದಿ