ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಸೇರುವಂತೆ ಪರೋಕ್ಷವಾಗಿ ಆಹ್ವಾನ ನೀಡಿದ್ದಾರೆ. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ ಸಮಾರಂಭದಲ್ಲಿ ನಳಿನ್ ಈ ರೀತಿಯಾಗಿ ಆಹ್ವಾನ ನೀಡಿದರು.
ರಾಜೇಂದ್ರ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಜನೌಷಧಿ ಮಳಿಗೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ. ಅವರು ರಾಷ್ಟ್ರ ಮಟ್ಟದ ನಾಯಕ ಆಗಬೇಕು ಎಂಬುದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ ನಮ್ಮೆಲ್ಲರ ಆಸೆ ಎಂದಿದ್ದಾರೆ.
Kshetra Samachara
16/11/2020 11:11 am