ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ಕಾರಣಿಕ ಪುರುಷರಾಗಿರುವ "ಕೋಟಿ- ಚೆನ್ನಯ" ಅವರ ಹೆಸರು ಇಡಬೇಕೆಂದು ಒತ್ತಾಯಿಸಿ ಮಂಗಳೂರು ಕದ್ರಿ ಪಾರ್ಕ್ ಬಳಿಯಿಂದ ಬಜ್ಪೆ ಕೆಂಜಾರು ತನಕ ಪಂಜಿನ ಮೆರವಣಿಗೆ ನಡೆಯಲಿದೆ.
ಈಗ ಮಾಜಿ ಸಚಿವ ಬಿ.ರಮಾನಾಥ ರೈ ಪಂಜಿನ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ವೇಳೆ ಮಾಜಿ ಶಾಸಕ ಅಭಯಚಂದ್ರ ಜೈನ್, ದ.ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
18/11/2020 08:37 pm