ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 103 ನೇ ಜನ್ಮ ದಿನೋತ್ಸವ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪರ್ಚನೆ ನೆರವೇರಿಸಿ, ಮಾತನಾಡಿದ ಮಾಜಿ ಸಚಿವ ರಮಾನಾಥ ರೈ,
ಇಂದಿರಾ ಗಾಂಧಿಯವರು ಹೆಣ್ಮಗಳಾಗಿ ದೇಶದಲ್ಲಿ ಸುದೀರ್ಘ ಕಾಲ ಪ್ರಧಾನಮಂತ್ರಿಯಾಗಿ ಜಗತ್ತಿನ ಯಾವುದೇ ದೇಶಕ್ಕೆ ತಲೆಬಾಗದೆ ಉಕ್ಕಿನ ಮಹಿಳೆ ಎಂದು ಕರೆಸಿಕೊಂಡವರು. ಬಡವರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದವರು ಎಂದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್. ಲೋಬೊ, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Kshetra Samachara
19/11/2020 01:16 pm