ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಉಳ್ಳಾಲವನ್ನು 'ಪಾಕಿಸ್ತಾನ' ನಕ್ಕೆ ಹೋಲಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಎಸ್ ಡಿಪಿಐ ಪಟ್ಟು

ಮಂಗಳೂರು: ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಎಸ್ ಡಿಪಿಐ ಪಕ್ಷ ಮಂಗಳೂರಿನ ಉಳ್ಳಾಲದ ಮಾಸ್ತಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿತು.

ನ.1ರಂದು ಕೇಶವ ಶಿಶು ಮಂದಿರ ವತಿಯಿಂದ ನಡೆದ ಸಭೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮಾಡಿದ ಪ್ರಚೋದನಾಕಾರಿ ಭಾಷಣದಲ್ಲಿ ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿ ನೀಡಿದ್ದ ಹೇಳಿಕೆ ಖಂಡಿಸಿ, ಅವರ ಬಂಧನಕ್ಕೆ ಎಸ್ ಡಿಪಿಐ ಪ್ರತಿಭಟನೆ ನಡೆಸಿತು.

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಬೇಕು. ಉಳ್ಳಾಲವನ್ನು ಪಾಕಿಸ್ತಾನ ಎಂಬ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ್ ಭಟ್ ರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಎಸ್ ಡಿಪಿಐ ಕಾರ್ಯಕರ್ತರು ಭಾಗವಹಿಸಿದ್ದರು.

Edited By : Manjunath H D
Kshetra Samachara

Kshetra Samachara

19/11/2020 06:48 pm

Cinque Terre

18.66 K

Cinque Terre

8

ಸಂಬಂಧಿತ ಸುದ್ದಿ