ಮಂಗಳೂರು: ನವಂಬರ್ 15ರಂದು ಮಾರಣಾಂತಿಕವಾಗಿ ಹಲ್ಲೆ ಗೊಳಗಾದ ವೆಂಜ್ ಅಬ್ದುಲ್ಲಾ ಕೊಲೆಯತ್ನ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಗುರುಪುರ-ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಕಳೆದ ಎರಡು ವರ್ಷಗಳಿಂದ ಕೈಕಂಬ ಪರಿಸರದಲ್ಲಿ ಕೆಲವು ಸಂಸ್ಥೆಗಳಲ್ಲಿ ನಡೆಯುತ್ತಿದ್ದ ಅವ್ಯವಹಾರವನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಬ್ದುಲ್ಲಾ ಅವರ ಹತ್ಯೆಗೆ ಈ ಮುಂಚೆಯೂ ಪ್ರಯತ್ನ ನಡೆದಿತ್ತು. ಅಲ್ಲದೇ ಮನೆಗಳಿಗೆ ನುಗ್ಗಿ ಕೊಲೆಗೆ ಪ್ರಯತ್ನ ನಡೆದಿತ್ತು. ಈ ಕುರಿತು ಪೊಲೀಸ್ ಠಾಣೆಗೆ ದೂರಲಾಗಿತ್ತು.
ಆದರೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿರುವ ಮುಸ್ಲಿಂ ಸಂಘಟನೆಗಳ ಒಕ್ಕೂಟ ಕೊಲೆಯತ್ನ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ನಂಬರ್ 23ರ ಸೋಮವಾರ ಬಜಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಫೇಸ್ಬುಕ್ನಲ್ಲಿ ಮಾತನಾಡಿದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ನಾಯಕರು ತಲವಾರು ದಾಳಿ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿ ಸೂಕ್ತ ವಿಚಾರಣೆ ನಡೆಸಿದ ಪೊಲೀಸರು ಆಸಕ್ತಿ ತೋರುವಂತೆ ಕಾಣುತ್ತಿಲ್ಲ ಎಂದು ಆರೋಪಿಸಿದ್ದಾರೆ.
Kshetra Samachara
20/11/2020 12:20 pm