ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಮೊಗವೀರ ಸಮುದಾಯಕ್ಕೆ ಸೇರಿದ ಮೀನುಗಾರರ ಸಮುದಾಯದ ಆಡಳಿತ ಪಕ್ಷದ ಏಕೈಕ ಪ್ರತಿನಿಧಿಯಾದ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಲಾಲಾಜಿ.ಆರ್. ಮೆಂಡನ್ ಅವರಿಗೆ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಸಮಾನಮನಸ್ಕ ಮೀನುಗಾರರ ವೇದಿಕೆ ಆಗ್ರಹಿಸಿದೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೀನುಗಾರರ ವೇದಿಕೆಯ ನಾಯಕರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರವಿದೆ.
ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡದೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ ಎಂಬ ಕೊರಗು ನಮ್ಮನ್ನು ಕಾಡುತ್ತಿದೆ ಎಂದು ಹೇಳಿದರು. ಬಿಜೆಪಿ ಪಕ್ಷ ಮಾತ್ರ ನಮ್ಮ ಸಮುದಾಯಕ್ಕೆ ಪ್ರಾತಿನಿಧಿತ್ವ ನೀಡುವುದು ಮೊಗವೀರ ಸಮುದಾಯವನ್ನು ನೀಲೇಶ ಮಾಡ್ತಾ ಇರೋದು ಬಹಳ ಖೇದಕರ. ಕರ್ನಾಟಕ ವಿಧಾನಸಭಾ ಸದಸ್ಯರುಗಳ ಪೈಕಿ ಆಡಳಿತ ಪಕ್ಷದ ಮೊಗವೀರ ಸಮುದಾಯಕ್ಕೆ ಸೇರಿರುವ ವಿಧಾನಸಭಾ ಸದಸ್ಯರ ಸಂಖ್ಯೆ ಕೇವಲ ಒಂದು. ಮೊಗವೀರ ಸಮುದಾಯಕ್ಕೆ ಸೇರಿರುವ ಕರ್ನಾಟಕ ಏಕೈಕ ಶಾಸಕರಾದ ಭಾರತೀಯ ಜನತಾ ಪಕ್ಷದಿಂದ ಆರು ಬಾರಿ ಸ್ಪರ್ಧೆ ಮಾಡಿ ಮೂರು ಬಾರಿ ಶಾಸಕರಾಗಿರುವ ಹಿರಿಯ ಅನುಭವಿ, ಕಳಂಕರಹಿತ ರಾಜಕಾರಣಿಯಾಗಿರುವ ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಲಾಲಾಜಿ ಆರ್.ಮೆಂಡನ್ ರವರಿಗೆ ಕರ್ನಾಟಕ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ನಾವು ಕರ್ನಾಟಕದ ಸಮಸ್ತ ಮೊಗವೀರ ಸಮುದಾಯದ ಪರವಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಬಿಜೆಪಿ ಪಕ್ಷದ ಹೈಕಮಾಂಡ್ ಗೆ ಸಮಾನಮನಸ್ಕ ಮೀನುಗಾರರ ವೇದಿಕೆ ಮನವಿ ಮಾಡಿದೆ ಎಂದು ಹೇಳಿದರು.
Kshetra Samachara
20/11/2020 12:49 pm