ಉಡುಪಿ: ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಸರಕಾರಗಳು ರೈತರಿಗೆ ಮಾರಕವಾಗುವ ಮಸೂದೆಗಳನ್ನು ತಿದ್ದುಪಡಿ ಮೂಲಕ ತಂದು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಬೆಲೆ ಏರಿಕೆ ಹಾಗೂ ಜನರ ಸೌಲಭ್ಯ ಕಸಿಯುವುದರೊಂದಿಗೆ ಜನ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ವಿರೋಧ ಪಕ್ಷವಾಗಿ ಕಾಂಗ್ರೆಸ್ ಜನತೆಗೆ ಮನವರಿಕೆ ಮಾಡಿಕೊಡುವಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.
ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಯುವಕರಲ್ಲಿ ಹುಮ್ಮಸ್ಸು ಇಮ್ಮಡಿಯಾಗಿದೆ. ಅವರ ಕರಾವಳಿ ಭೇಟಿ ಸಮಯ ಯುವಕರಿಗೆ ಹೆಚ್ಚಿನ ಜವಾಬ್ದಾರಿ ನೀಡುವಂತೆ ಸಲಹೆ ನೀಡಿದರು.
ಕೇಂದ್ರ, ರಾಜ್ಯ ಸರಕಾರಗಳ ರೈತ ವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಪ್ರತಿಯ ಪ್ರದರ್ಶನ ಯಶಸ್ವಿಗೊಳಿಸಲು ಸಹಕರಿಸಿದ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕೃತಜ್ಞತೆ ಸಲ್ಲಿಸಿದರು.
Kshetra Samachara
21/11/2020 05:54 pm