ಮುಲ್ಕಿ: ಲೋಕಮುಖಿ ಟ್ರಸ್ಟ್ ಕಟ್ಟಡ ನಿರ್ಮಾಣ ಸಮಿತಿ ಶೀನಪ್ಪಯ್ಯ ಕೋಡಿ ಕಟ್ಟಡದ ಶಿಲಾನ್ಯಾಸ ಪುನರೂರು ಬಳಿಯ ಶೀನಪ್ಪಯ್ಯ ಕೋಡಿಯಲ್ಲಿ ನಡೆಯಿತು.
ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ದೀಪ ಪ್ರಜ್ವಲನೆ ಮಾಡಿದರು. ಪುತ್ತೂರು ವಿವೇಕಾನಂದ ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದರು.
ಕಟ್ಟಡ ಸಮಿತಿ ಅಧ್ಯಕ್ಷ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಟ್ಟಡದ ನೀಲನಕ್ಷೆ ಅನಾವರಣಗೊಳಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಮನವಿ ಪತ್ರ ಬಿಡುಗಡೆ ಮಾಡಿ ಕಟ್ಟಡದ ಅಭಿವೃದ್ಧಿಗೆ ಎಲ್ಲರ ಸಹಕಾರ ಕೋರಿದರು.
ಮುಖ್ಯ ಅತಿಥಿಗಳಾಗಿ ಲೋಕಮುಖಿ ಟ್ರಸ್ಟ್ ಅಧ್ಯಕ್ಷ ಸೋಂದಾ ಭಾಸ್ಕರ ಭಟ್, ಕಟ್ಟಡ ಸಮಿತಿ ಸಂಚಾಲಕ ಸುನಿಲ್ ಆಳ್ವ, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ,ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು,ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ, ಜಿಪಂ ಸದಸ್ಯ ವಿನೋದ್ ಬೊಳ್ಳೂರು, ತಾಪಂ ಸದಸ್ಯ ಶರತ್ ಕುಬೆವೂರು,ನಿವೃತ್ತ ಪ್ರಾಂಶುಪಾಲ ವೈ.ಎನ್. ಸಾಲ್ಯಾನ್, ಪುನರೂರು ದೇವಳದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಮುಲ್ಕಿ ನ.ಪಂ. ಅಧ್ಯಕ್ಷ ಸುಭಾಷ್ ಶೆಟ್ಟಿ,ಉಪಾಧ್ಯಕ್ಷ ಸತೀಶ್ ಅಂಚನ್, ಈಶ್ವರ ಕಟೀಲು,ಗಂಗಾಧರ ಶೆಟ್ಟಿ ಬರ್ಕೆತೋಟ ಉಪಸ್ಥಿತರಿದ್ದರು.
ಸೋಂದಾ ಭಾಸ್ಕರ ಭಟ್ ಸ್ವಾಗತಿಸಿದರು. ಪಾರ್ಥಸಾರಥಿ ನಿರೂಪಿಸಿದರು. ಕಟ್ಟಡ ಸಮಿತಿ ಸಂಚಾಲಕ ಸುನಿಲ್ ಆಳ್ವ ವಂದಿಸಿದರು.
Kshetra Samachara
23/11/2020 01:46 pm