ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ತಾಪಂ ಸಾಮಾನ್ಯ ಸಭೆಗೆ ಅಧಿಕಾರಿಗಳು ಗೈರು; ಸದಸ್ಯರ ಆಕ್ರೋಶ

ಕಾಪು: ಕಾಪು ತಾಪಂ ಸಾಮಾನ್ಯ ಸಭೆಯಲ್ಲಿ ಬೆರಳೆಣಿಕೆಯಷ್ಟು ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದು, ಹೆಚ್ಚಿನ ಅಧಿಕಾರಿಗಳ ಗೈರು ಹಾಜರಿಯಿಂದಾಗಿ ಅಸಮಾಧಾನಗೊಂಡ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಸೋಮವಾರ ನಡೆಯಿತು.

ಸುಮಾರು 30 ಇಲಾಖೆ ಅಧಿಕಾರಿಗಳು ಭಾಗವಹಿಸಬೇಕಿದ್ದ ಸಭೆಯಲ್ಲಿ ಕೇವಲ ಬೆರಳೆಣಿಕೆಯಷ್ಟು ಅಧಿಕಾರಿಗಳು ಭಾಗವಹಿಸಿದ್ದರು. ಜನಪ್ರತಿನಿಧಿಗಳು ಅವರವರ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಪ್ರಶ್ನಿಸುತ್ತಿದ್ದರೆ, ಉತ್ತರಿಸಬೇಕಾದ ಇಲಾಖೆ ಅಧಿಕಾರಿಗಳು ಸಭೆಗೆ ಬಾರದೆ ಇರುವುದು ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತ್ಯೇಕ ಅನುದಾನ ಹೇಗೂ ಬರುವುದಿಲ್ಲ. ಸಮಸ್ಯೆ ಬಗ್ಗೆ ಉತ್ತರಿಸಬೇಕಾದ ಅಧಿಕಾರಿಗಳೇ ಸಭೆಗೆ ಆಗಮಿಸದಿರುವುದು ನಮ್ಮ ದೌರ್ಭಾಗ್ಯ ಎಂದು ಕೆಲವು ಸದಸ್ಯರು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಕಾರ್ಯನಿರ್ವಹಣೆ ಅಧಿಕಾರಿಗಳು, ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸಭೆಯ ಬಗ್ಗೆ ಮುಂಚಿತವಾಗಿ ಮಾಹಿತಿ ರವಾನಿಸಲಾಗಿದೆ. ಕಾಪು ತಾಲೂಕಿನಲ್ಲಿ ಪ್ರತ್ಯೇಕ ಇಲಾಖೆಗಳು ಕಾರ್ಯ ನಿರ್ವಹಿಸದೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಇಲಾಖೆಗಳು ತಾಲೂಕಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಮಾಹಿತಿ ನೀಡದ ಪರಿಣಾಮ ತೊಂದರೆಯಾಗಿದೆ. ಮುಂದಿನ ದಿನದಲ್ಲಿ ಸರಿಪಡಿಸಲಾಗುವುದು ಎಂದರು.

Edited By : Manjunath H D
Kshetra Samachara

Kshetra Samachara

23/11/2020 04:32 pm

Cinque Terre

9.21 K

Cinque Terre

2

ಸಂಬಂಧಿತ ಸುದ್ದಿ