ಸುಬ್ರಹ್ಮಣ್ಯ: ಈ ವರ್ಷದ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಉತ್ಸವವನ್ನು ಧಾರ್ಮಿಕ ಪರಂಪರೆ ಹಾಗೂ ದೇಗುಲದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದ ರೀತಿ ಸರಕಾರದ ಕೋವಿಡ್ ನಿಯಮಾವಳಿಗೆ ಅನುಗುಣವಾಗಿ ನೆರವೇರಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ ಸಚಿವರು, ದೇವರ ದರ್ಶನದ ಬಳಿಕ ವರದಿಗಾರರೊಂದಿಗೆ ಮಾತನಾಡಿದರು.
ಹಲವು ವರ್ಷಗಳ ಪರಂಪರೆಯುಳ್ಳ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಈ ಹಿಂದೆ ಅವಕಾಶವಿತ್ತು. ಆದರೆ, ಈ ಬಾರಿ ಕೋವಿಡ್ 19 ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವ ಸೇವೆ ನೆರವೇರಿಸಲು ಭಕ್ತರಿಗೆ ಅವಕಾಶವಿರುವುದಿಲ್ಲ. ಪೂಜೆ ವಿಧಿವಿಧಾನ ಸಾಂಕೇತಿಕವಾಗಿ ನೆರವೇರಿಸಲಾಗುವುದು.
ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನರಿಗೆ ಯಾವುದೇ ತೊಂದರೆ ನೀಡದೆ ಅರಣ್ಯ ಪ್ರದೇಶದಲ್ಲಿ ಯಥಾಸ್ಥಿತಿ ಕಾಪಾಡಲಾಗುವುದು,ಅರಣ್ಯ ಪ್ರದೇಶದಲ್ಲಿ ವಾಸಿಸುವ ಬುಡಕಟ್ಟು ಜನಾಂಗದ ಜನರು ಸೇರಿದಂತೆ ಯಾರಿಗೂ ಸಮಸ್ಯೆ ಆಗದಂತೆ ಸರಕಾರ ನೋಡಿಕೊಳ್ಳಲು ಬದ್ಧವಿದೆ ಎಂದರು.
Kshetra Samachara
23/11/2020 06:34 pm